ಪೂಂಛ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಉಗ್ರರ ದಾಳಿ ನಡೆದ ಪ್ರದೇಶದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.
ಸುರಾನ್‌ಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯ ಡೇರಾ ಕಿ ಗಲಿ ಮತ್ತು ಬುಫ್ಲಿಯಾಜ್ ನಡುವೆ ಧಾತ್ಯರ್ ಮೋರ್‌ನಲ್ಲಿ ದಾಳಿ ನಡೆದಿತ್ತು.
ಉಗ್ರರ ಪತ್ತೆಗಾಗಿ ವೈಮಾನಿಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ವಿಶೇಷ ತರಬೇತಿ ಪಡೆದ ಸ್ನಿಫರ್ ಶ್ವಾನ ಬಳಕೆ ಮಾಡಲಾಗಿದೆ. ಈ ಪ್ರದೇಶದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.
ಕಾರ್ಯಾಚರಣೆ ಮುಂದುವರಿದಿದ್ದು, ಇಡೀ ಪ್ರದೇಶವನ್ನು ಸೇನೆ ಸುತ್ತುವರಿದಿದೆ. ಹೆಚ್ಚುವರಿ ಸೇನಾಪಡೆಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೂಂಛ್ ಜಿಲ್ಲೆಯಲ್ಲಿ ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ 'ಎಎನ್‌ಐ' ವಿಡಿಯೊ
#WATCH | Security personnel are conducting a search operation in the forest area of Dera ki Gali in the Rajouri district of Jammu, where two Army vehicles were ambushed by heavily armed terrorists yesterday
— ANI (@ANI) December 22, 2023
(Visuals deferred by unspecified time) pic.twitter.com/jF4bmOJTo2
