ಕಾಲಿವುಡ್‌ನ ಹಿರಿಯ ನಟ, ರಾಜಕಾರಣಿ 'ಕ್ಯಾಪ್ಟನ್' ವಿಜಯಕಾಂತ್ ಅವರು ಗುರುವಾರ (ಡಿ.28) ಬೆಳಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ನ್ಯುಮೋನಿಯಾದಿಂದ ಬಳಲುತ್ತಿದ್ದ ವಿಜಯಕಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೇ ಅವರು ಸಾವನ್ನಪ್ಪಿದ್ದಾರೆ.
ತಮಿಳು ಚಿತ್ರರಂಗದ ಹಿರಿಯ ನಟ, ಡಿಎಂಡಿಕೆ ಪಕ್ಷದ ನಾಯಕ 'ಕ್ಯಾಪ್ಟನ್' ವಿಜಯಕಾಂತ್
ಡಿ.28ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ
ವಿಜಯಕಾಂತ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಮಧ್ಯೆ ಅವರಿಗೆ ಕೊರೊನಾ
ವೈರಸ್ ಕೂಡ ತಗುಲಿತ್ತು. ಇದೀಗ ವೈದ್ಯರು, ಚಿಕಿತ್ಸೆ ಫಲಕಾರಿಯಾಗದೆ ವಿಜಯಕಾಂತ್
ಮೃತಪಟ್ಟಿದ್ದಾರೆ ಎಂದು ಅಧಿಕೃತ ಹೇಳಿಕೆ ಹೊರಡಿಸಿದ್ದಾರೆ.
ವಿಜಯಕಾಂತ್
ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ, ನೂರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು
ಆಸ್ಪತ್ರೆ ಎದುರು ಜಮಾಯಿಸಿದ್ದರು. ನೆಚ್ಚಿನ ನಾಯಕ ಇನ್ನಿಲ್ಲ ಎಂಬ ವಿಚಾರ
ತಿಳಿಯುತ್ತಿದ್ದಂತೆಯೇ, ಅಭಿಮಾನಿಗಳು ಆಘಾತಗೊಂಡಿದ್ದಾರೆ. ಆಸ್ಪತ್ರೆ ಸುತ್ತಮುತ್ತ
ಬಿಗಿಭದ್ರತೆ ಏರ್ಪಡಿಸಲಾಗಿದೆ.

